ಪಾದಾ ಭಕ್ತರನ ಪೊರೆವ ಪಾದಾ
Category: ಶ್ರೀಕೃಷ್ಣ
Author: ವಿಜಯದಾಸ
ಪಾದಾ ಭಕ್ತರನ ಪೊರೆವ ಪಾದಾ
ಪಾದಾ ಸಿರಿದೇವಿ ಉರದಲ್ಲಿ ಒಪ್ಪುವ ಪಾದಾ
ಧರಣಿಪತಿ ಬಲಿಯನ್ನು ನೆಲಕೆ ಒತ್ತಿದ ಪಾದಾ
ಸುರನದಿಯ ಹರುಷದಲಿ ಪಡೆದ ಪಾದಾ
ಧುರದೊಳಗೆ ಪಾರ್ಥನ ಶಿರವ ಕಾಯ್ದ ಪಾದಾ
ಸುರರು ಸನಕಾದಿಗಳು ವಂದಿಸುವ ಪಾದಾ ||1||
ಕೋಪದಲಿ ಉರಗನ ಪೆಡೆಯ ತುಳಿದ ಪಾದಾ
ತಾಪಸರ ಮನಕೆ ನಿಲಕದ ಪಾದಾ
ಭೂಪ ಕೌರವನ ತಲೆಕೆಳಗೆ ಮಾಡಿದ ಪಾದಾ
ಕಾಪಾಲಿ ಪೂಜಿಸುವ ಕಡು ದಿವ್ಯ ಪಾದಾ||2||
ಹಸುಳೆತನದಲಿ ಶಕಟಾಸುರನನೊದೆದ ಪಾದಾ
ಋಷಿಪತ್ನಿ ಶಾಪ ವಿಶ್ಶಾಪ ಪಾದಾ
ವಿಷ ಕರ್ತು ರಿಪು ವಿನಾಶ ಕರದಿ ಮೆರೆವ ಪಾದಾ
ವಸುಧಿಯೊಳು ವಿಜಯವಿಠ್ಠಲನ ಪಾದಾ||3||