ಬಲಿಯ ಮನೆಗೆ

Category: ಶ್ರೀಕೃಷ್ಣ

Author: ಪುರಂದರದಾಸ

ಬಲಿಯ ಮನೆಗೆ ವಾಮನ ಬಂದಂತೆ
ಭಗೀರಥಗೆ ಶ್ರೀಗಂಗೆ ಬಂದಂತೆ
ಮುಚುಕುಂದಗೆ ಮುಕುಂದ ಬಂದಂತೆ
ಗೋಪಿಯರಿಗೆ ಗೋವಿಂದ ಬಂದಂತೆ
ವಿದುರನ ಮನೆಗೆ ಶ್ರೀಕೃಷ್ಣ ಬಂದಂತೆ
ವಿಭೀಷಣನೆಡೆಗೆ ಶ್ರೀರಾಮ ಬಂದಂತೆ
ನಿನ್ನ ನಾಮವು ನನ್ನ ನಾಲಿಗೆಗೆ ಬರಲಿ
ಬರಲಿ ಬರಲಿ ಶ್ರೀಪುರಂದರವಿಟ್ಠಲ ||