ಅಯ್ಯಾ, ಕತ್ತಲೆಯ ಕಳೆದುಳಿದ ಸತ್ಯಶರಣರ

Category: ವಚನಗಳು

Author: ಅಕ್ಕಮಹಾದೇವಿ

ಅಯ್ಯಾ, ಕತ್ತಲೆಯ ಕಳೆದುಳಿದ ಸತ್ಯಶರಣರ
ಪರಿಯನೇನೆಂಬೆನಯ್ಯಾ

ಘನವನೊಳಕೊಂಡ ಮನದ ಮಹಾನುಭಾವಿಗಳ
ಬಳಿವಿಡಿದು ಬದುಕುವೆನಯ್ಯಾ.

ಅಯ್ಯಾ, ನಿನ್ನಲ್ಲಿ ನಿಂದು ಬೇರೊಂದರಿಯದ
ಲಿಂಗಸುಖಿಗಳ ಸಂಗದಲ್ಲಿ ದಿನವ ಕಳೆಯಿಸಯ್ಯಾಚೆನ್ನಮಲ್ಲಿಕಾರ್ಜುನಾ.