ಅಯ್ಯಾ, ನಿಮ್ಮ ಶರಣರು ಮೆಟ್ಟಿದ ಧರೆ

Category: ವಚನಗಳು

Author: ಅಕ್ಕಮಹಾದೇವಿ

ಅಯ್ಯಾ, ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯಾ.

ಅಯ್ಯಾ, ನಿಮ್ಮ ಶರಣರಿದ್ದ ಪುರವೆ ಕೈಲಾಸಪುರವಯ್ಯಾ.

ಅಯ್ಯಾ, ನಿಮ್ಮ ಶರಣರು ನಿಂದುದೆ ನಿಜನಿವಾಸವಯ್ಯಾ.

ಚೆನ್ನಮಲ್ಲಿಕಾರ್ಜುನಯ್ಯಾ,
ನಿಮ್ಮ ಶರಣ ಬಸವಣ್ಣನಿದ್ದ ಕ್ಷೇತ್ರ ಅವಿಮುಕ್ತ ಕ್ಷೇತ್ರವಾಗಿ,
ಆನು ಸಂಗನಬಸವಣ್ಣನ ಶ್ರೀಪಾದಕ್ಕೆನಮೋ ನಮೋ ಎನುತಿರ್ದೆನು.