ಅಯ್ಯಾ, ನಿಮ್ಮ ಸಜ್ಜನ ಸದ್ಭಕ್ತರ ಕಂಡೆನಾಗಿ,

Category: ವಚನಗಳು

Author: ಅಕ್ಕಮಹಾದೇವಿ

ಅಯ್ಯಾ, ನಿಮ್ಮ ಸಜ್ಜನ ಸದ್ಭಕ್ತರ ಕಂಡೆನಾಗಿ,
ಎನ್ನ ಕಂಗಳ ಪಟಲ ಹರಿಯಿತ್ತಿಂದು.

ಅಯ್ಯಾ, ನಿಮ್ಮ ಸಜ್ಜನಸದ್ಭಕ್ತರ ಶ್ರೀಚರಣಕ್ಕೆರಗಿದೆನಾಗಿ,
ಎನ್ನ ಹಣೆಯ ಲಿಖಿತ ತೊಡೆಯಿತ್ತಿಂದು.

ಚೆನ್ನಮಲ್ಲಿಕಾರ್ಜುನಯ್ಯಾ,
ನಿಮ್ಮ ಶರಣ ಸಂಗನಬಸವಣ್ಣನ ಪಾದವ ಕಂಡುಮಿಗೆ ಮಿಗೆ ನಮೋ ನಮೋ ಎನುತಿರ್ದೆನಯ್ಯಾ.