ಅಕ್ಕಿಯಿಲ್ಲದ ತುಷಕ್ಕೆ ಅಗ್ಗವಣಿಯನೆರೆದಡೆ

Category: ವಚನಗಳು

Author: ಅಕ್ಕಮಹಾದೇವಿ

ಅಕ್ಕಿಯಿಲ್ಲದ ತುಷಕ್ಕೆ ಅಗ್ಗವಣಿಯನೆರೆದಡೆ
ಅದೆಂದಿಂಗೆ ಬೆಳೆದು ಫಲವಪ್ಪುದಯ್ಯಾ
ಅರಿವಿಲ್ಲದವರಿಗೆ ಆಚಾರವಿದ್ದಡೆ

ಅರಕೆಗೆಟ್ಟು ಸುಖವೆಂದಪ್ಪುದಯ್ಯಾ
ಹೊರೆದ ಪರಿಮಳ ಸ್ಥಿರವಾಗಬಲ್ಲುದೆ

ಎನ್ನದೇವ ಚೆನ್ನಮಲ್ಲಿಕಾರ್ಜುನನನರಿಯದವರಿಗೆ
ಆಚಾರವಿಲ್ಲ ಕಾಣಿರಣ್ಣಾ