ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು.

Category: ವಚನಗಳು

Author: ಅಕ್ಕಮಹಾದೇವಿ

ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು.
ಬರಲುಗೊಂಡ ಸಸಿಗೆ ಮಳೆ ಸುರಿದಂತಾಯಿತ್ತು ನೋಡಾ ಇಂದೆನಗೆ.
ಇಹದ ಸುಖ ಪರದ ಗತಿ ನಡೆದು ಬಂದಂತಾಯಿತ್ತು ನೋಡಾ ಎನಗೆ.
ಚೆನ್ನಮಲ್ಲಿಕಾರ್ಜುನಯ್ಯಾ,ಗುರುಪಾದವ ಕಂಡು ಧನ್ಯಳಾದೆ ನೋಡಾ.