ಅರಿಯದವರೊಡನೆ ಸಂಗವ ಮಾಡಿದಡೆ
Category: ವಚನಗಳು
Author: ಅಕ್ಕಮಹಾದೇವಿ
ಅರಿಯದವರೊಡನೆ ಸಂಗವ ಮಾಡಿದಡೆ
ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ.
ಬಲ್ಲವರೊಡನೆ ಸಂಗವ ಮಾಡಿದಡೆ
ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ.
ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಸಂಗವ
ಮಾಡಿದಡೆಕರ್ಪುರದ ಗಿರಿಯನುಎಕೊಂಬಂತೆ.