ಅರ್ಥಸನ್ಯಾಸಿಯಾದಡೇನಯ್ಯಾ,
Category: ವಚನಗಳು
Author: ಅಕ್ಕಮಹಾದೇವಿ
ಅರ್ಥಸನ್ಯಾಸಿಯಾದಡೇನಯ್ಯಾ,
ಆವಂಗದಿಂದ ಬಂದಡೂ ಕೊಳದಿರಬೇಕು.
ರುಚಿಸನ್ಯಾಸಿಯಾದಡೇನಯ್ಯಾ,
ಜಿಹ್ವೆಯ ಕೊನೆಯಲ್ಲಿ ಮಧುರವನರಿಯದಿರಬೇಕು.
ಸ್ತ್ರೀ ಸನ್ಯಾಸಿಯಾದಡೇನಯ್ಯಾ,
ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ತಟ್ಟಿಲ್ಲದಿರಬೇಕು.
ದಿಗಂಬರಿಯಾದಡೇನಯ್ಯಾ,
ಮನ ಬತ್ತಲೆ ಇರಬೇಕು.
ಇಂತೀ ಚತುರ್ವಿಧದ ಹೊಲಬರಿಯದೆ
ವೃಥಾ ಕೆಟ್ಟರುಕಾಣಾ ಚೆನ್ನಮಲ್ಲಿಕಾರ್ಜುನಾ.