ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ.

Category: ವಚನಗಳು

Author: ಅಕ್ಕಮಹಾದೇವಿ

ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ.
ಅರ್ಥವ ಕೊಡುವವರಿಂಗೆ ಪಾಷಾಣವೆಸೆವ ಲೋಕ.
ಹೆಣ್ಣು ಹೊನ್ನು ಮಣ್ಣು ಮೂರನೂ
ಕಣ್ಣಿನಲಿ ನೋಡಿ, ಕಿವಿಯಲಿ ಕೇಳಿ,
ಕೈಯಲಿ ಮುಟ್ಟಿ, ಮಾಡುವ ಭಕ್ತಿ
ಸಣ್ಣವರ ಸಮಾರಾಧನೆಯಾಯಿತ್ತು.
ತನ್ನನಿತ್ತು ತುಷ್ಟಿವಡೆವರನೆನಗೆ
ತೋರಾಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.