ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ,

Category: ವಚನಗಳು

Author: ಅಕ್ಕಮಹಾದೇವಿ

ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ,
ಕೂರುಮ ದಿಗುದಂತಿ ದಿಗುವಳಯವ ನುಂಗಿ,
ನಿಜಶೂನ್ಯ ತಾನಾದ ಬಳಿಕ,
ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬಹುದೆ
ಕಂಗಳ ನೋಟದಲ್ಲಿ ಮನದ ಸೊಗಸಿನಲ್ಲಿ,
ಅನಂಗನ ದಾಳಿಯನಗಲಿದೆನಣ್ಣಾ.
ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಯೊಳಗಹುದೆ
ಎನ್ನದೇವ ಚೆನ್ನಮಲ್ಲಿಕಾರ್ಜುನನಲ್ಲದೆಪರಪುರುಷರು ನಮಗಾಗದಣ್ಣಾ.