ಆಡಬಹುದು ಪಾಡಬಹುದಲ್ಲದೆ

Category: ವಚನಗಳು

Author: ಅಕ್ಕಮಹಾದೇವಿ

ಆಡಬಹುದು ಪಾಡಬಹುದಲ್ಲದೆ
ನುಡಿದಂತೆ ನಡೆಯಬಾರದು ಎಲೆ ತಂದೆ.
ಲಿಂಗಕ್ಕೆ ಶರಣೆನ್ನಬಹುದಲ್ಲದೆ
ಜಂಗಮಕ್ಕೆ ಶರಣೆನ್ನಬಾರದೆಲೆ ತಂದೆ.
ಚೆನ್ನಮಲ್ಲಿಕಾರ್ಜುನದೇವಾ,ನಿಮ್ಮ ಶರಣರು
ನುಡಿದಂತೆ ನಡೆಯಬಲ್ಲರು ಎಲೆ ತಂದೆ.