ಆಡುವುದು ಹಾಡುವುದು ಹೇಳುವುದು ಕೇಳುವುದು

Category: ವಚನಗಳು

Author: ಅಕ್ಕಮಹಾದೇವಿ

ಆಡುವುದು ಹಾಡುವುದು ಹೇಳುವುದು ಕೇಳುವುದು
ನಡೆವುದು ನುಡಿವುದು
ಸರಸ ಸಮ್ಮೇಳವಾಗಿಪ್ಪುದಯ್ಯಾ ಶರಣರೊಡನೆ.
ಚೆನ್ನಮಲ್ಲಿಕಾರ್ಜುನಯ್ಯಾ, ನೀ ಕೊಟ್ಟ
ಆಯುಷ್ಯವುಳ್ಳನ್ನಕ್ಕರಲಿಂಗಸುಖಿಗಳ ಸಂಗದಲ್ಲಿ ದಿನಗಳ ಕಳೆವೆನು.