ಆವ ವಿದ್ಯೆಯ ಕಲಿತಡೇನು

Category: ವಚನಗಳು

Author: ಅಕ್ಕಮಹಾದೇವಿ

ಆವ ವಿದ್ಯೆಯ ಕಲಿತಡೇನು
ಸಾವ ವಿದ್ಯೆ ಬೆನ್ನಬಿಡದು.
ಅಶನವ ತೊರೆದಡೇನು, ವ್ಯಸನವ ಮರೆದಡೇನು
ಉಸುರ ಹಿಡಿದಡೇನು, ಬಸುರ ಕಟ್ಟಿದಡೇನು
ಚೆನ್ನಮಲ್ಲಿಕಾರ್ಜುನದೇವಯ್ಯಾ, ನೆಲ
ತಳವಾರನಾದಡೆ ಕಳ್ಳನೆಲ್ಲಿಗೆ ಹೋಹನು