ಬೆಟ್ಟದಂಥ ದುರಿತವು

Category: ಶ್ರೀಕೃಷ್ಣ

Author: ಪುರಂದರದಾಸ

ಬೆಟ್ಟದಂಥ ದುರಿತವು ಸುತ್ತಮುತ್ತಲೊಟ್ಟಿರೆ
ಕೃಷ್ಣನಾಮದ ಕಿಡಿಬಿದ್ದು ಬೆಂದುಹೋದುದ ಕಂಡೆನಯ್ಯ ||

ಎಲೆ ಎಲೆ ದುರಿತವೆ ತಿರುಗಿ ನೋಡದೆ ಹೋಗು
ಎಲೆ ಎಲೆ ದುರಿತವೆ ಮರಳಿ ನೋಡದೆ ಹೋಗು
ನಿನ್ನ ಕಂಡರೆ ಕೃಷ್ಣ ಶಿಕ್ಷಿಸದೆ ಬಿಡನು
ಇನ್ನೊಮ್ಮೆ ಕಂಡರೆ ಶಿರವ ಚೆಂಡಾಡುವನು
ಪುಂಡರೀಕಾಕ್ಷ ನಮ್ಮ ಪುರಂದರವಿಟ್ಠಲ ||