ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ,
Category: ವಚನಗಳು
Author: ಅಕ್ಕಮಹಾದೇವಿ
ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ,
ಆಯುಷ್ಯವೆಂಬ ರಾಶಿ ಅಳೆದು ತೀರದ ಮುನ್ನ
ಶಿವನ ನೆನೆಯಿರೆ ! ಶಿವನ ನೆನೆಯಿರೆ ! ಈ ಜನ್ಮ ಬಳಿಕಿಲ್ಲ.
ಚೆನ್ನಮಲ್ಲಿಕಾರ್ಜುನದೇವರದೇವನ ನೆನೆದು ಪಂಚಮಹಾಪಾತಕರೆಲ್ಲರು ಮುಕ್ತಿವಡೆದರಂದು ?