ಎರದ ಮುಳ್ಳಿನಂತೆ ಪರಗಂಡರೆನಗವ್ವಾ.

Category: ವಚನಗಳು

Author: ಅಕ್ಕಮಹಾದೇವಿ

ಎರದ ಮುಳ್ಳಿನಂತೆ ಪರಗಂಡರೆನಗವ್ವಾ.
ಸೋಂಕಲಮ್ಮೆ ಸುಳಿಯಲಮ್ಮೆ
ನಂಬಿ ನಚ್ಚಿ ಮಾತಾಡಲಮ್ಮೆನವ್ವಾ.
ಚೆನ್ನಮಲ್ಲಿಕಾರ್ಜುನನಲ್ಲದ ಗಂಡರಿಗೆ ಉರದಲ್ಲಿ
ಮುಳ್ಳುಂಟೆಂದು ನಾನಪ್ಪಲಮ್ಮೆನವ್ವಾ.