ಎಮ್ಮೆಗೊಂದು ಚಿಂತೆ ಸಮ್ಮಗಾರಗೊಂದು ಚಿಂತೆ.

Category: ವಚನಗಳು

Author: ಅಕ್ಕಮಹಾದೇವಿ

ಎಮ್ಮೆಗೊಂದು ಚಿಂತೆ ಸಮ್ಮಗಾರಗೊಂದು ಚಿಂತೆ.
ಧರ್ಮಿಗೊಂದು ಚಿಂತೆ ಕರ್ಮಿಗೊಂದು ಚಿಂತೆ.
ಎನಗೆ ಎನ್ನ ಚಿಂತೆ, ತನಗೆ ತನ್ನ ಕಾಮದ ಚಿಂತೆ.
ಒಲ್ಲೆ ಹೋಗು, ಸೆರಗ ಬಿಡು ಮರುಳೆ.
ಎನಗೆ ಚೆನ್ನಮಲ್ಲಿಕಾರ್ಜುನದೇವರು ಒಲಿವರೊ ಒಲಿಯರೊ ಎಂಬ ಚಿಂತೆ ?