ಒಳಗ ಶೋದಿಸಿ ಹೊರಗ ಶುದ್ಧಯಿಸಿ
Category: ವಚನಗಳು
Author: ಅಕ್ಕಮಹಾದೇವಿ
ಒಳಗ ಶೋದಿಸಿ ಹೊರಗ ಶುದ್ಧಯಿಸಿ
ಒಳಹೊರಗೆಂಬ ಉಭಯ ಶಂಕೆಯ ಕಳೆದು,
ಸ್ಫಟಿಕದ ಶಲಾಕೆಯಂತೆ ತಳವೆಳಗು ಮಾಡಿ
ಸುಕ್ಷೇತ್ರವನರಿದು ಬೀಜವ ಬಿತ್ತುವಂತೆ
ಶಿಷ್ಯನ ಸರ್ವ ಪ್ರಪಂಚ ನಿವೃತ್ತಿಯಂ ಮಾಡಿ ನಿಜೋಪದೇಶವನಿತ್ತು,
ಆ ಶಿಷ್ಯನ ನಿಜದಾದಿಯನೈದಿಸುವನೀಗ ಜ್ಞಾನಗುರು.
ಆ ಸಹಜ ಗುರುವೀಗ ಜಗದಾರಾಧ್ಯನು,
ಅವನ ಶ್ರೀಪಾದಕ್ಕೆ ನಮೋ ನಮೋ ಎಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ.