ಕಂಗಳಲ್ಲಿ ಕಾಂಬೆನೆಂದು
Category: ವಚನಗಳು
Author: ಅಕ್ಕಮಹಾದೇವಿ
ಕಂಗಳಲ್ಲಿ ಕಾಂಬೆನೆಂದು
ಕತ್ತಲೆಯ ಹೊಕ್ಕಡೆಂತಹುದಯ್ಯಾ ?
ಬೆಟ್ಟದ ತುದಿಯ ಮೆಟ್ಟಲೆಂದು
ಹಳ್ಳಕೊಳ್ಳಂಗಳಲ್ಲಿ ಇಳಿದಡೆಂತಹುದಯ್ಯಾ ?
ನೀನಿಕ್ಕಿದ ಸಯದಾನವನೊಲ್ಲದೆ
ಬೇರೆ ಬಯಸಿದೊಡೆಂತಹುದಯ್ಯಾ ?
ಚೆನ್ನಮಲ್ಲಿಕಾರ್ಜುನನ ಘನವನರಿಯಲೆಂದು
ಕಿರುಕುಳಕ್ಕೆ ಸಂದಡೆಂತಹುದಯ್ಯಾ ?ಕತ್ತಲೆಯ ಹೊಕ್ಕಡೆಂತಹುದಯ್ಯಾ ?
ಬೆಟ್ಟದ ತುದಿಯ ಮೆಟ್ಟಲೆಂದು
ಹಳ್ಳಕೊಳ್ಳಂಗಳಲ್ಲಿ ಇಳಿದಡೆಂತಹುದಯ್ಯಾ ?
ನೀನಿಕ್ಕಿದ ಸಯದಾನವನೊಲ್ಲದೆ
ಬೇರೆ ಬಯಸಿದೊಡೆಂತಹುದಯ್ಯಾ ?
ಚೆನ್ನಮಲ್ಲಿಕಾರ್ಜುನನ ಘನವನರಿಯಲೆಂದು
ಕಿರುಕುಳಕ್ಕೆ ಸಂದಡೆಂತಹುದಯ್ಯಾ ?