ಕಲ್ಲಹೊತ್ತು ಕಡಲೊಳಗೆ ಮುಳುಗಿದಡೆ

Category: ವಚನಗಳು

Author: ಅಕ್ಕಮಹಾದೇವಿ

ಕಲ್ಲಹೊತ್ತು ಕಡಲೊಳಗೆ ಮುಳುಗಿದಡೆ
ಎಡರಿಂಗೆ ಕಡೆಯುಂಟೆ ಅವ್ವಾ ?
ಉಂಡು ಹಸಿವಾಯಿತ್ತೆಂದಡೆ ಭಂಗವೆಂಬೆ.
ಕಂಡ ಕಂಡ ಠಾವಿನಲ್ಲಿ ಮನ ಬೆಂದಡೆ ಗಂಡ ಚೆನ್ನಮಲ್ಲಿಕಾರ್ಜುನಯ್ಯನೆಂತೊಲಿವನವ್ವಾ ?