ಕುಲಗಿರಿಯ ಶಿಖರದ ಮೇಲೆ ಬಾಳೆ ಬೆಳೆವುದಯ್ಯಾ ಎಂದಡೆ,
Category: ವಚನಗಳು
Author: ಅಕ್ಕಮಹಾದೇವಿ
ಕುಲಗಿರಿಯ ಶಿಖರದ ಮೇಲೆ ಬಾಳೆ ಬೆಳೆವುದಯ್ಯಾ ಎಂದಡೆ,
ಬಾಳೆ ಬೆಳೆವುದಯ್ಯಾ ಎನಬೇಕು.
ಓರೆಗಲ್ಲ ನುಗ್ಗುಗುಟ್ಟಿ ಮೆಲಬಹುದಯ್ಯಾ ಎಂದಡೆ,
ಅದು ಅತ್ಯಂತ ಮೃದು ಮೆಲಬಹುದಯ್ಯಾ ಎನಬೇಕು.
ಸಿಕ್ಕದ ಠಾವಿನಲ್ಲಿ ಉಚಿತವ ನುಡಿವುದೆ ಕಾರಣ
ಚೆನ್ನಮಲ್ಲಿಕಾರ್ಜುನ ಮತ್ರ್ಯಕ್ಕೆ ಬಂದುದಕ್ಕಿದೆ ಗೆಲವು.