ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು.

Category: ವಚನಗಳು

Author: ಅಕ್ಕಮಹಾದೇವಿ

ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು.
ಕರಣ ಮೀಸಲಾಗಿ ನಿನಗರ್ಪಿತವಾಯಿತ್ತು.
ಆನೊಂದರಿಯೆನಯ್ಯಾ.
ಎನ್ನ ಗತಿ ನೀನಾಗಿ, ಎನ್ನ ಮತಿ ನೀನಾಗಿ,
ಪ್ರಾಣ ನಿನಗರ್ಪಿತವಾಯಿತ್ತು.
ನೀನಲ್ಲದೆ ಪೆರತೊಂದ ನೆನೆದಡೆ ಆಣೆ, ನಿಮ್ಮಾಣೆ ಚೆನ್ನಮಲ್ಲಿಕಾರ್ಜುನಾ.