ಕೇಳವ್ವಾ ಕೇಳವ್ವಾ ಕೆಳದಿ ನಾನೊಂದು ಕನಸುವ ಕಂಡೆ.
Category: ವಚನಗಳು
Author: ಅಕ್ಕಮಹಾದೇವಿ
ಕೇಳವ್ವಾ ಕೇಳವ್ವಾ ಕೆಳದಿ ನಾನೊಂದು ಕನಸುವ ಕಂಡೆ.
ಗಿರಿಯಮೇಲೊಬ್ಬ ಗೊರವ ಕುಳ್ಳಿರ್ದುದ ಕಂಡೆ
ಚಿಕ್ಕ ಚಿಕ್ಕ ಜಡೆಗಳ ಸುಲಿಪಲ್ಲ ಗೊರವನು
ಬಂದೆನ್ನ ನೆರೆದ ನೋಡವ್ವಾ
ಆತನನಪ್ಪಿಕೊಂಡು ತಳವೆಳಗಾದೆನು.
ಚೆನ್ನಮಲ್ಲಿಕಾರ್ಜುನನ ಕಂಡು ಕಣ್ಣು ಮುಚ್ಚಿ ತೆರೆದು ತಳವೆಳಗಾದೆನು.