ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದಡೆ,
Category: ವಚನಗಳು
Author: ಅಕ್ಕಮಹಾದೇವಿ
ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದಡೆ,
ತನ್ನ ಸವೆಯಲಿಲ್ಲ, ಕಳವು ದೊರೆಯಲಿಲ್ಲ ?
ಬೊಬ್ಬುಲಿಯನೇರಿದ ಮರ್ಕಟನಂತೆ
ಹಣ್ಣ ಮೆಲ್ಲಲಿಲ್ಲ, ಕುಳ್ಳಿರೆ ಠಾವಿಲ್ಲ.
ನಾನು ಸರ್ವಸಂಗಪರಿತ್ಯಾಗಮಾಡಿದವಳಲ್ಲ,
ನಿಮ್ಮ ಕೂಡಿ ಕುಲವಳಿದವಳಲ್ಲ, ಚೆನ್ನಮಲ್ಲಿಕಾರ್ಜುನಾ.