ಧರೆಯ ಮೇಗಣ ಹುಲ್ಲೆ, ಚಂದ್ರಮನೊಳಗಣ ಎರಳೆ,
Category: ವಚನಗಳು
Author: ಅಕ್ಕಮಹಾದೇವಿ
ಧರೆಯ ಮೇಗಣ ಹುಲ್ಲೆ, ಚಂದ್ರಮನೊಳಗಣ ಎರಳೆ,
ಕೂರ್ತಡೆ ಫಲವೇನೋ ಕೂಟವಿಲ್ಲದನ್ನಕ್ಕ
ಇಂಬನರಿಯದ ಠಾವಿನಲ್ಲಿ ಕಣ್ಣೋಟವ ಮಾಡಿದಡೆ,
ತುಂಬಿದ ತೊರೆಯ ನಡುವೆ ಮಾಮರ ಕಾತಂತೆ.
ಚೆನ್ನಮಲ್ಲಿಕಾರ್ಜುನದೇವಾ, ದೂರದ ಸ್ನೇಹವಮಾಡಲು ಬಾರದ ಭವಕ್ಕೆ ಬಂದೆ.