ಧನದ ಮೇಲೆ ಬಂದವರೆಲ್ಲ ಅನುಸರಿಗಳಲ್ಲದೆ

Category: ವಚನಗಳು

Author: ಅಕ್ಕಮಹಾದೇವಿ

ಧನದ ಮೇಲೆ ಬಂದವರೆಲ್ಲ ಅನುಸರಿಗಳಲ್ಲದೆ
ಆಗುಮಾಡಬಂದವರಲ್ಲ.
ಮನದ ಮೇಲೆ ಬಂದು ನಿಂದು ಜರೆದು ನುಡಿದು
ಪಥವ ತೋರಬಲ್ಲಡಾತನೆ ಸಂಬಂಧಿ.
ಹಾಗಲ್ಲದೆ ಅವರಿಚ್ಚೆಯ ನುಡಿದು ತನ್ನುದರವ ಹೊರೆವ ಬಚ್ಚಣಿಗಳ ಮಚ್ಚುವನೆ ಚೆನ್ನಮಲ್ಲಿಕಾರ್ಜುನ ?