ದೃಶ್ಯವಾದ ರವಿಯ ಬೆಳಗು, ಆಕಾಶದ ವಿಸ್ತೀರ್ಣ,

Category: ವಚನಗಳು

Author: ಅಕ್ಕಮಹಾದೇವಿ

ದೃಶ್ಯವಾದ ರವಿಯ ಬೆಳಗು, ಆಕಾಶದ ವಿಸ್ತೀರ್ಣ,
ವಾಯುವಿನ ಚಲನೆ, ತರುಗುಲ್ಮ ಲತಾದಿಗಳಲ್ಲಿಯ ತಳಿರು ಪುಷ್ಪ
ಷಡುವರ್ಣಂಗಳೆಲ್ಲ ಹಗಲಿನ ಪೂಜೆ.
ಚಂದ್ರಪ್ರಕಾಶ ನಕ್ಷತ್ರ ಅಗ್ನಿ ವಿದ್ಯುತ್ತಾದಿಗಳು
ದೀಪ್ತಮಯವೆನಿಸಿಪ್ಪವೆಲ್ಲ ಇರುಳಿನ ಪೂಜೆ.
ಹಗಲಿರುಳು ನಿನ್ನ ಪೂಜೆಯಲ್ಲಿ ಎನ್ನ ಮರೆದಿಪ್ಪೆನಯ್ಯಾ ಚೆನ್ನಮಲ್ಲಿಕಾರ್ಜುನಾ.