ದೇವಲೋಕದವರಿಗೂ ಬಸವಣ್ಣನೆ ದೇವರು.

Category: ವಚನಗಳು

Author: ಅಕ್ಕಮಹಾದೇವಿ

ದೇವಲೋಕದವರಿಗೂ ಬಸವಣ್ಣನೆ ದೇವರು.
ಮತ್ರ್ಯಲೋಕದವರಿಗೂ ಬಸವಣ್ಣನೆ ದೇವರು.
ನಾಗಲೋಕದವರಿಗೂ ಬಸವಣ್ಣನೆ ದೇವರು.
ಮೇರುಗಿರಿ ಮಂದರಗಿರಿ ಮೊದಲಾದವೆಲ್ಲಕ್ಕೂ ಬಸವಣ್ಣನೆ ದೇವರು.
ಚೆನ್ನಮಲ್ಲಿಕಾರ್ಜುನಯ್ಯಾ, ನಿಮಗೂ ಎನಗೂ ನಿಮ್ಮ ಶರಣರಿಗೂ ಬಸವಣ್ಣನೆ ದೇವರು.