ನಾಣಮರೆಯ ನೂಲು ಸಡಿಲಲು

Category: ವಚನಗಳು

Author: ಅಕ್ಕಮಹಾದೇವಿ

ನಾಣಮರೆಯ ನೂಲು ಸಡಿಲಲು
ನಾಚುವರು ನೋಡಾ ಗಂಡು ಹೆಣ್ಣೆಂಬ ಜಾತಿಗಳು.
ಪ್ರಾಣದೊಡೆಯ ಜಗದೊಳಗೆ ಮುಳುಗಲು ತೆರಹಿಲ್ಲದಿರಲು
ದೇವರ ಮುಂದೆ ನಾಚಲೆಡೆಯುಂಟೆ ?
ಚೆನ್ನಮಲ್ಲಿಕಾರ್ಜುನ ಜಗವೆಲ್ಲ ಕಣ್ಣಾಗಿ ನೋಡುತ್ತಿರಲು ಮುಚ್ಚಿ ಮರಸುವ ಠಾವಾವುದು ಹೇಳಯ್ಯಾ ?