ನಿತ್ಯವೆಂಬ ನಿಜಪದವೆನ್ನ ಹತ್ತೆಸಾರ್ದು ಕಂಡಬಳಿಕ

Category: ವಚನಗಳು

Author: ಅಕ್ಕಮಹಾದೇವಿ

ನಿತ್ಯವೆಂಬ ನಿಜಪದವೆನ್ನ ಹತ್ತೆಸಾರ್ದು ಕಂಡಬಳಿಕ
ಚಿತ್ತ ಕರಗಿ ಮನ ಕೊರಗಿ ಹೃದಯವರಳಿತ್ತು ನೋಡಯ್ಯಾ.
ಒತ್ತಿ ಬಿಗಿದ ಸೆರೆಯೊಳಗೆ ಅತ್ತಿತ್ತಲೆಂದರಿಯದೆ
ಚೆನ್ನಮಲ್ಲಿಕಾರ್ಜುನನ ಪಾದದಲ್ಲಿ ಮರೆದೊರಗಿದೆ ನೋಡಯ್ಯಾ.