ಪಂಚೇಂದ್ರಿಯಂಗಳೊಳಗೆ

Category: ವಚನಗಳು

Author: ಅಕ್ಕಮಹಾದೇವಿ

ಪಂಚೇಂದ್ರಿಯಂಗಳೊಳಗೆ
ಒಂದಕ್ಕೆ ಪ್ರಿಯನಾದಡೆ ಸಾಲದೆ ?
ಸಪ್ತವ್ಯಸನಂಗಳೊಳಗೆ
ಒಂದಕ್ಕೆ ಪ್ರಿಯನಾದಡೆ ಸಾಲದೆ ?
ರತ್ನದ ಸಂಕಲೆಯಾದಡೇನು ಬಂಧನ ಬಿಡುವುದೆ ಚೆನ್ನಮಲ್ಲಿಕಾರ್ಜುನಾ ?