ಬಸವಣ್ಣನ ಪಾದವ ಕಂಡೆನಾಗಿ

Category: ವಚನಗಳು

Author: ಅಕ್ಕಮಹಾದೇವಿ

ಬಸವಣ್ಣನ ಪಾದವ ಕಂಡೆನಾಗಿ
ಎನ್ನಂಗ ನಾಸ್ತಿಯಾಯಿತ್ತು.
ಚೆನ್ನಬಸವಣ್ಣನ ಪಾದವ ಕಂಡೆನಾಗಿ
ಎನ್ನ ಪ್ರಾಣಬಯಲಾಯಿತ್ತು.
ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ
ಎನ್ನ ಅರಿವು ಸ್ವಯವಾಯಿತ್ತು.
ಚೆನ್ನಮಲ್ಲಿಕಾರ್ಜುನದೇವಯ್ಯಾ
ನಿಮ್ಮ ಶರಣರ ಕರುಣವ ಪಡೆದೆನಾಗಿ ನಿನಗೆ ಮತ್ತಾವುದಿಲ್ಲವಯ್ಯ ಪ್ರಭುವೆ.