ಬಸವಣ್ಣನೆ ಗುರು, ಪ್ರಭುದೇವರೆ ಲಿಂಗ,

Category: ವಚನಗಳು

Author: ಅಕ್ಕಮಹಾದೇವಿ

ಬಸವಣ್ಣನೆ ಗುರು, ಪ್ರಭುದೇವರೆ ಲಿಂಗ,
ಸಿದ್ಧರಾಮಯ್ಯನೆ ಜಂಗಮ,
ಮಡಿವಾಳಯ್ಯನೆ ಜಂಗಮ,
ಚೆನ್ನಬಸವಣ್ಣನೆನ್ನ ಪರಮಾರಾಧ್ಯರು.
ಇನ್ನು ಸುಖಿಯಾದೆನು ಕಾಣಾ ಚೆನ್ನಮಲ್ಲಿಕಾರ್ಜುನಯ್ಯಾ.