ಮಾಡಿ ಮಾಡಿ ಕೆಟ್ಟರು

Category: ಶ್ರೀಶಿವ

Author: ಬಸವಣ್ಣ

ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ ||

ಮಾಡಿದೆನೆಂಬುದು ಮನದಲಿ ಹೊಳೆದರೆ
ನೀಡಿದೆನೆಂಬುದು ನಿಜದಲಿ ತಿಳಿದರೆ
ಏಡಿಸಿ ಕಾಡಿತ್ತು ಶಿವನ ಡಂಗುರ ||

ಮಾಡಿದೆನೆನ್ನದಿರಾ ಲಿಂಗಕೆ
ನೀಡಿದೆನೆನ್ನದಿರಾ ಜಂಗಮಕೆ
ಮಾಡುವ ನೀಡುವ ನಿಜಗುಣವುಳ್ಳವರ
ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಯ್ಯ ||