ಬಿಟ್ಟೆನೆಂದಡೆ ಬಿಡದೀ ಮಾಯೆ,
Category: ವಚನಗಳು
Author: ಅಕ್ಕಮಹಾದೇವಿ
ಬಿಟ್ಟೆನೆಂದಡೆ ಬಿಡದೀ ಮಾಯೆ,
ಬಿಡದಿದ್ದಡೆ ಬೆಂಬತ್ತಿತ್ತು ಮಾಯೆ.
ಯೋಗಿಗೆ ಯೋಗಿಣಿಯಾಯಿತ್ತು ಮಾಯೆ,
ಸವಣಂಗೆ ಸವಣಿಯಾಯಿತ್ತು ಮಾಯೆ.
ಯತಿಗೆ ಪರಾಕಿಯಾಯಿತ್ತು ಮಾಯೆ.
ನಿನ್ನ ಮಾಯೆಗೆ ನಾನಂಜುವಳಲ್ಲ, ಚೆನ್ನಮಲ್ಲಿಕಾರ್ಜುನದೇವಾ, ನಿಮ್ಮಾಣೆ.