ಮರವಿದ್ದು ಫಲವೇನು ನೆಳಲಿಲ್ಲದನ್ನಕ್ಕ ?

Category: ವಚನಗಳು

Author: ಅಕ್ಕಮಹಾದೇವಿ

ಮರವಿದ್ದು ಫಲವೇನು ನೆಳಲಿಲ್ಲದನ್ನಕ್ಕ ?
ಧನವಿದ್ದು ಫಲವೇನು ದಯವಿಲ್ಲದನ್ನಕ್ಕ ?
ಹಸುವಿದ್ದು ಫಲವೇನು ಹಯನಿಲ್ಲದನ್ನಕ್ಕ ?
ರೂಪಿದ್ದು ಫಲವೇನು ಗುಣವಿಲ್ಲದನ್ನಕ್ಕ ?
ಅಗಲಿದ್ದು ಫಲವೇನು ಬಾನವಿಲ್ಲದನ್ನಕ್ಕ ?
ನಾನಿದ್ದು ಫಲವೇನು ನಿಮ್ಮ e್ಞನವಿಲ್ಲದನ್ನಕ್ಕ ಚೆನ್ನಮಲ್ಲಿಕಾರ್ಜುನಾ ?