ಮರಹು ಬಂದಿಹುದೆಂದು ಗುರು ಕುರುಹನೆ ಕೊಟ್ಟ ;
Category: ವಚನಗಳು
Author: ಅಕ್ಕಮಹಾದೇವಿ
ಮರಹು ಬಂದಿಹುದೆಂದು ಗುರು ಕುರುಹನೆ ಕೊಟ್ಟ ;
ಅರಿವಿಂಗೆ ಪ್ರಾಣಲಿಂಗ ಬೇರೆ ಕಾಣಿರಣ್ಣಾ.
ನಿರ್ಣಯವಿಲ್ಲದ ಭಕ್ತಿಗೆ ಬರಿದೆ ಬಳಲಲದೇತಕೆ ?
ಚೆನ್ನಮಲ್ಲಿಕಾರ್ಜುನಯ್ಯನನರಿದು ಪೂಜಿಸಿದಡೆ ಮರಳಿ ಭವಕ್ಕೆ ಬಹನೆ ?