ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ.

Category: ವಚನಗಳು

Author: ಅಕ್ಕಮಹಾದೇವಿ

ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ.
ಅಸ್ತಮಾನದಿಂದ ಮೇಲೆ ಜಿತೇಂದ್ರಿಯರಿಲ್ಲ.
ವಿಧಿಯ ಮೀರುವ ಅಮರರಿಲ್ಲ.
ಕ್ಷುಧೆ ವಿಧಿ ವ್ಯಸನಕ್ಕಂಜಿ,
ನಾ ನಿಮ್ಮ ಮರೆಹೊಕ್ಕು ಬದುಕಿದೆನು ಚೆನ್ನಮಲ್ಲಿಕಾರ್ಜುನಾ.