ಮನೆ ಮನೆದಪ್ಪದೆ ಕೈಯೊಡ್ಡಿ ಬೇಡುವಂತೆ ಮಾಡಯ್ಯ ?
Category: ವಚನಗಳು
Author: ಅಕ್ಕಮಹಾದೇವಿ
ಮನೆ ಮನೆದಪ್ಪದೆ ಕೈಯೊಡ್ಡಿ ಬೇಡುವಂತೆ ಮಾಡಯ್ಯ ?
ಬೇಡಿದಡೆ ಇಕ್ಕದಂತೆ ಮಾಡಯ್ಯ ?
ಇಕ್ಕಿದಡೆ ನೆಲಕ್ಕೆ ಬೀಳುವಂತೆ ಮಾಡಯ್ಯ ?
ನೆಲಕ್ಕೆ ಬಿದ್ದಡೆ ನಾನೆತ್ತಿಕೊಂಬುದಕ್ಕೆ ಮುನ್ನವೆ
ಸುನಿಯೆತ್ತಿಕೊಂಬಂತೆ ಮಾಡಾ ಚೆನ್ನಮಲ್ಲಿಕಾರ್ಜುನಯ್ಯ || 327 ||