ಮನೆಯೆನ್ನದು, ತನುವೆನ್ನದು, ಧನವೆನ್ನದೆನ್ನೆನಯ್ಯಾ.

Category: ವಚನಗಳು

Author: ಅಕ್ಕಮಹಾದೇವಿ

ಮನೆಯೆನ್ನದು, ತನುವೆನ್ನದು, ಧನವೆನ್ನದೆನ್ನೆನಯ್ಯಾ.
ಮನ ನಿಮ್ಮದು, ತನು ನಿಮ್ಮದು, ಧನ ನಿಮ್ಮದು ಎಂದಿಪ್ಪೆನಯ್ಯಾ.
ಸತಿಯಾನು, ಪತಿಯುಂಟು, ಸುಖ ಉಂಟೆಂಬುದ
ಮನ, ಭಾವದಲ್ಲಿ ಅರಿದೆನಾದಡೆ, ನಿಮ್ಮಾಣೆಯಯ್ಯಾ.
ನೀನಿರಿಸಿದ ಗೃಹದಲ್ಲಿ ನಿನ್ನಿಚ್ಫೆಯವಳಾಗಿಪ್ಪೆನಲ್ಲದೆ
ಅನ್ಯವನರಿಯೆ ಕಾಣಾ ಚೆನ್ನಮಲ್ಲಿಕಾರ್ಜುನಾ.