ಮುಂಗೈಯಲ್ಲಿ ವೀರಗಂಕಣವಿಕ್ಕಿ,

Category: ವಚನಗಳು

Author: ಅಕ್ಕಮಹಾದೇವಿ

ಮುಂಗೈಯಲ್ಲಿ ವೀರಗಂಕಣವಿಕ್ಕಿ,
ಮುಂಗಾಲಲ್ಲಿ ತೊಡರುಬಾವುಲಿಯ ಕಟ್ಟಿದೆ.
ಗಂಡುಡಿಗೆಯನುಟ್ಟೆನೆಂಬ ಮಾತಿನ ಬಿರಿದ ನುಂಗಿದೆನು.
ಚೆನ್ನಮಲ್ಲಿಕಾರ್ಜುನಾ,
ನಿಮ್ಮಾಣೆಗೆ ಊಣೆಯವ ತಂದೆನಾದಡೆ, ನಿಮ್ಮ ತೊತ್ತಿನ ಮಗಳಲ್ಲಯ್ಯಾ.