ಮೊಲೆ ಬಿದ್ದು, ಮುಡಿ ಸಡಲಿ, ಗಲ್ಲ ಬತ್ತಿ, ತೋಳು ಕಂದಿದವಳ
Category: ವಚನಗಳು
Author: ಅಕ್ಕಮಹಾದೇವಿ
ಮೊಲೆ ಬಿದ್ದು, ಮುಡಿ ಸಡಲಿ, ಗಲ್ಲ ಬತ್ತಿ, ತೋಳು ಕಂದಿದವಳ
ಎನ್ನನೇಕೆ ನೋಡುವಿರಿ ಎಲೆ ಅಣ್ಣಗಳಿರಾ ?
ಕುಲವಳಿದು bsಲವಳಿದು ಭವಗೆಟ್ಟು ಭಕ್ತೆಯಾದವಳ,
ಎನ್ನನೇಕೆ ನೋಡುವಿರಿ ಎಲೆ ತಂದೆಗಳಿರಾ ?
ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದು bsಲವಳಿದವಳನು.