ರತ್ನದ ಸಂಕೋಲೆಯಾದಡೆ ತೊಡರಲ್ಲವೆ ?

Category: ವಚನಗಳು

Author: ಅಕ್ಕಮಹಾದೇವಿ

ರತ್ನದ ಸಂಕೋಲೆಯಾದಡೆ ತೊಡರಲ್ಲವೆ ?
ಮುತ್ತಿನ ಬಲೆಯಾದಡೆ ಬಂಧನವಲ್ಲವೆ ?
ಚಿನ್ನದ ಕತ್ತಿಯಲ್ಲಿ ತಲೆಹೊಯ್ದಡೆ ಸಾಯದಿರ್ಪರೆ ?
ಲೋಕದ ಭಜನೆಯ ಭಕ್ತಿಯಲ್ಲಿ ಸಿಲುಕಿದಡೆ
ಜನನಮರಣ ಬಿಡುವುದೆ ಚೆನ್ನಮಲ್ಲಿಕಾರ್ಜುನಾ ?