ರವಿಯ ಕಾಳಗವ ಗೆಲಿದು, ಒಂಬತ್ತು ಬಾಗಿಲ ಮುರಿದು,

Category: ವಚನಗಳು

Author: ಅಕ್ಕಮಹಾದೇವಿ

ರವಿಯ ಕಾಳಗವ ಗೆಲಿದು, ಒಂಬತ್ತು ಬಾಗಿಲ ಮುರಿದು,
ಅಷ್ಟಧವಳಾರಮಂ ಸುಟ್ಟು, ಮೇಲುಪ್ಪರಿಗೆಯ ಮೆಟ್ಟಿ,
ಅಲ್ಲಅಹುದು, ಉಂಟುಇಲ್ಲ, ಬೇಕುಬೇಡೆಂಬ
ಆರರಿತಾತನೆ ಗುರು ತಾನೆ ಬೇರಿಲ್ಲ.
ದ್ವಯಕಮಳದಲ್ಲಿ ಉದಯವಾದ ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣ ಸಂಗನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.