ವಿರಕ್ತಿಯೇ ಅವಿರಕ್ತಿ, ವಿರಕ್ತನೆನ್ನದಿರಣ್ಣಾ.

Category: ವಚನಗಳು

Author: ಅಕ್ಕಮಹಾದೇವಿ

ವಿರಕ್ತಿಯೇ ಅವಿರಕ್ತಿ, ವಿರಕ್ತನೆನ್ನದಿರಣ್ಣಾ.
ನೋಟದ ಕರುಳ ಕೊಯ್ಯದನ್ನಕ್ಕರ,
ಕ್ರೀಯದ ಕರಬೋನಗಳೊಡೆಯದನ್ನಕ್ಕರ,
ಅಷ್ಟಮದಾದಿಗಳೆಂಬವ ಹೊಟ್ಟುಹುರಿಯದನ್ನಕ್ಕರ,
ಬೇಕುಬೇಡಾಯೆಂದು ಪರಿವ
ಸರ್ವಸಂದೇಹವ ಹೂಳದನ್ನಕ್ಕರ ವಿರಕ್ತ ವಿರಕ್ತನೆನ್ನದಿರಣ್ಣಾ.
ಶ್ರೀಶೈಲಚೆನ್ನಮಲ್ಲಿಕಾರ್ಜುನದೇವನೊಬ್ಬನೆ ವಿರಕ್ತ ಕಾಣಿರಣ್ಣಾ.