ಹಗಲು ನಾಲ್ಕುಜಾವ ನಿಮ್ಮ ಕಳವಳದಲ್ಲಿಪ್ಪೆನು.
Category: ವಚನಗಳು
Author: ಅಕ್ಕಮಹಾದೇವಿ
ಹಗಲು ನಾಲ್ಕುಜಾವ ನಿಮ್ಮ ಕಳವಳದಲ್ಲಿಪ್ಪೆನು.
ಇರುಳು ನಾಲ್ಕುಜಾವ ಲಿಂಗದ ವಿಕಳಾವಸ್ಥೆಯಲ್ಲಿಪ್ಪೆನು.
ಹಗಲಿರುಳು ನಿಮ್ಮ ಹಂಬಲದಲ್ಲಿ ಮೈಮರೆದೊರಗಿಪ್ಪೆನು.
ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಒಲುಮೆ ನಟ್ಟು ಹಸಿವು
ತೃಷೆ ನಿದ್ರೆಯ ತೊರೆದೆನಯ್ಯಾ