ಯಾರ ಪ್ರೇಮದ ಪರಮಪೂರವು

Category: ಶ್ರೀರಾಮಕೃಷ್ಣ

Author: ಹೆಚ್ ಎನ್ ಮುರಳೀಧರ

ಯಾರ ಪ್ರೇಮದ ಪರಮಪೂರವು ನೀಚರೆದೆಗೂ ಹರಿಯಿತೋ,
ಯಾವ ಲೋಕಾತೀತಮಹಿಮನ ಕರುಣೆ ಲೋಕಕೆ ದುಡಿಯಿತೋ,
ಯಾವನಪ್ರತಿ - ಮಹಿಮನೋ ಮೇಣ್ ಮಾತೆ ಸೀತೆಯ ನಾಥನೋ,
ಯಾರು ಸೀತೆಯ ಭಕುತಿಯಿಂದಲಿ ಜ್ಞಾನದೇಹದಿ ವ್ಯಾಪ್ತನೋ;

ಯಾರು ಮಧುತರ ಶಾಂತಗೀತೆಯ ಯುದ್ಧರಂಗದಿ ಮೊಳಗುತ
ಪ್ರಳಯಶಬ್ದವ ಸ್ತಬ್ದಗೊಳಿಸುತ ಸಿಂಹನಾದವ ಸಿಡಿಸುತ
ಮೋಹತಿಮಿರವನಿಲ್ಲಗೈಯುತ ಕೃಷ್ಣರೂಪದಿ ನಿಂದನೋ
ಅವನೆ ಇಂದಿಗೆ ರಾಮಕೃಷ್ಣನ ಹೆಸರೊಳಸೆಯುತಲಿರುವನು |