ಹಾವಿನ ಹಲ್ಲ ಕಳೆದು ಹಾವನಾಡಿಸಬಲ್ಲಡೆ

Category: ವಚನಗಳು

Author: ಅಕ್ಕಮಹಾದೇವಿ

ಹಾವಿನ ಹಲ್ಲ ಕಳೆದು ಹಾವನಾಡಿಸಬಲ್ಲಡೆ
ಹಾವಿನ ಸಂಗವೆ ಲೇಸು ಕಂಡಯ್ಯಾ.
ಕಾಯದ ಸಂಗವ ವಿವರಿಸಬಲ್ಲಡೆ
ಕಾಯದ ಸಂಗವೆ ಲೇಸು ಕಂಡಯ್ಯಾ.
ತಾಯಿ ರಕ್ಕಸಿಯಾದಂತೆ ಕಾಯವಿಕಾರವು.
ಚೆನ್ನಮಲ್ಲಿಕಾರ್ಜುನಯ್ಯಾ, ನೀನೊಲಿದವರು ಕಾಯಗೊಂಡಿದ್ದರೆನಬೇಡ.