ಹೆಣ್ಣು ಹೆಣ್ಣಾದಡೆ ಗಂಡಿನಸೂತಕ.

Category: ವಚನಗಳು

Author: ಅಕ್ಕಮಹಾದೇವಿ

ಹೆಣ್ಣು ಹೆಣ್ಣಾದಡೆ ಗಂಡಿನಸೂತಕ.
ಗಂಡು ಗಂಡಾದಡೆ ಹೆಣ್ಣಿನಸೂತಕ.
ಮನದಸೂತಕ ಹಿಂಗಿದಡೆ
ತನುವಿನ ಸೂತಕಕ್ಕೆ ತೆರಹುಂಟೆ ?
ಅಯ್ಯಾ, ಮೊದಲಿಲ್ಲದ ಸೂತಕಕ್ಕೆ ಮರುಳಾಯಿತ್ತು ಜಗವೆಲ್ಲ.
ಎನ್ನ ದೇವ ಚೆನ್ನಮಲ್ಲಿಕಾರ್ಜುನನೆಂಬ ಗರುವಂಗೆ ಜಗವೆಲ್ಲ ಹೆಣ್ಣು ನೋಡಾ ಅಯ್ಯಾ.